ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಪೊಲೀಸ್ ಲೇನ್ ಶ್ರೀ ಅನ್ನಪೂರ್ಣೇಶ್ವರಿ ನಾಗ ದೇವರ ದೇವಸ್ಥಾನದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವ ಕಾರ್ಯಕ್ರಮ ಅ.11ರಿಂದ 21ರತನಕ ನಡೆಯಲಿದೆ.
ಪ್ರತಿದಿನ ಮಧ್ಯಾಹ್ನ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ ಗಂಟೆ 5.30ರಿಂದ 7.30ರತನಕ ಭಜನಾ ಸಂಕೀರ್ತನೆ ನಡೆಯಲಿದೆ. ಅ.14ರಂದು ಹೊಸ ಅಕ್ಕಿ ನೈವೇದ್ಯ ಸಮರ್ಪಣೆ ಮತ್ತು ತೆನೆ ವಿತರಣೆ, 15ರಂದು ಲಲಿತ ಪಂಚಮಿ, 20ರಂದು ಆಯುಧಪೂಜೆ, 21ರಂದು ದೇವರಿಗೆ ವಿಶೇಷ ಅಷ್ಟಾವಧಾನ ಸೇವೆ ನಡೆಯಲಿದೆ ಎಂದು ದೇವಳದ ಅಡಳಿತ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.
