ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಪ್ರತೀ ವರ್ಷಧಂತೆ ಈ ವರ್ಷವೂ ೭೧ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ಬಿ.ಜೆ.ಅನಂತಪದ್ಮನಾಭರಾವ್‌ರವನ್ನು “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಕಠಿಣ ಪರಿಶ್ರಮದಿಂದ ಮೂರುವರೆ ದಶಕಗಳಿಂದ ರೈತರಾಗಿ, ಪತ್ರಕರ್ತರಾಗಿ, ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ ಎಂದು ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.
ಯಾವುದೇ ಜಾತಿ, ಮತ, ಬೇಧವಿಲ್ಲದೆ ಕಳೆದ 25 ವರ್ಷಗಳಿಂದ “ಪವಮಾನ ಪ್ರತಿಷ್ಥಾನ” ಸ್ಥಾಪನೆ ಮಾಡಿ ಇತ್ತೀಚಿಗೆ ಹಿರಿಯ ನಾಗರೀಕರ ದಂಪತಿಗಳಿಗೆ “ಆದರ್ಶ ದಂಪತಿ” ಪ್ರಶಸ್ತಿ ನೀಡಿ ಗೌರವಿಸಿದರು. ಕಲಾಕುಂಚ ಮತ್ತು ಪವಮಾನ ಪ್ರತಿಷ್ಥಾನದ ಸರ್ವ ಸದಸ್ಯರು, ಪದಾಧಿಕಾರಿಗಳು ಬಿ.ಜೆ.ಅನಂತಪದ್ಮನಾಭರಾವ್ ರವರಿಗೆ ಅಭಿಮಾನದಿಂದ ಅಭಿನಂದಿಸಿದ್ದಾರೆ ಎಂದು ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.

