ಮಂಗಳೂರು : ಚಿತ್ರಕಲಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದು ಅಪಾರ ಕೊಡುಗೆ ನೀಡಿರುವ ಹಿರಿಯ ಕಲಾವಿದ ಬಿ.ಕೆ. ಮಾಧವ ರಾವ್ ಅವರನ್ನು ಕನ್ನಡ ಭವನದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಚಿತ್ರ ಕಲಾರತ್ನ ಅಚೀವ್‌ಮೆಂಟ್ ಅವಾರ್ಡ್-2026’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಜುಲೈ 26ರಂದು ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರಕಲಾ ಕ್ಷೇತ್ರದಲ್ಲಿ ಬಿ.ಕೆ. ಮಾಧವ ರಾವ್ ಅವರು ಹಲವು ದಶಕಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದು, ತಮ್ಮ ಕಲಾಕೃತಿಗಳ ಮೂಲಕ ಸಮಾಜದಲ್ಲಿ ಕಲಾಸಕ್ತಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಕಲಾ ಸಾಧನೆ, ಸೃಜನಶೀಲತೆ ಹಾಗೂ ಕನ್ನಡ ನಾಡಿನ ಸಾಂಸ್ಕೃತಿಕ ಮೌಲ್ಯಗಳ ಅಭಿವ್ಯಕ್ತಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತ್ಯಾಸಕ್ತರು, ಕಲಾವಿದರು ಮತ್ತು ಕನ್ನಡಾಭಿಮಾನಿಗಳು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಬಿ.ಕೆ. ಮಾಧವ ರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

