ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರು ಮತ್ತು ಪ್ರಮುಖರ ಸಭೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಲೀಡ್ ಕೊಡಿಸಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿನೂತನ ಹಾಗೂ ಪರಿಣಾಮಕಾರಿ ಕಾರ್ಯ ಯೋಜನೆಗಳು ಪ್ರಗತಿಯಲ್ಲಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿರೀಕ್ಷಿತ ಯೋಜನೆಯನ್ನು ಸಾಕಾರಗೊಳಿಸಲು ಶ್ರಮಿಸುವ ಜೊತೆಗೆ ಸಂಘಟಿತ ಪ್ರಯತ್ನದ ಮೂಲಕ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರ ದೊಡ್ಡ ಅಂತರದ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಬೇಕು ಎಂದು ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕರೆ ನೀಡಿದರು.
ಅವರು ಬಿಜೆಪಿ ಬೈಂದೂರು ಮಂಡಲ ಕಛೇರಿಯಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ, ಬೈಂದೂರು, ಯಡ್ತರೆ ಮತ್ತು ಪಡುವರಿಯ 26 ಬೂತ್ ಗಳ ಅಧ್ಯಕ್ಷರು, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಮಹಾ ಶಕ್ತಿ ಕೇoದ್ರದ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳು ಮತ್ತು ಬೈಂದೂರು ಕ್ಷೇತ್ರದಾದ್ಯoತ ನಡೆದ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳು ಅಭ್ಯರ್ಥಿಯ ಭರ್ಜರಿ ಗೆಲುವಿಗೆ ವರದಾನವಾಗಲಿದೆ. ಎಲ್ಲ ಬೂತ್ ಗಳಲ್ಲಿ ಮೈಕ್ರೋ ಕ್ಯಾಂಪನ್ ಸಹಿತ ಮನೆ ಮನೆ ಪ್ರಚಾರಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಅವರು ತಿಳಿಸಿದರು.
ಮೇ 3ರಂದು ಯಡ್ತರೆ ಜಂಕ್ಷನ್ ನಿಂದ ಬೆಳಿಗ್ಗೆ ಗಂಟೆ 10.00ಕ್ಕೆ ಹೊರಡಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮತ್ತು ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರ ಬ್ರಹತ್ ರೋಡ್ ಶೋ ಕುರಿತು ಅವರು ಮಾಹಿತಿ ನೀಡಿದರು.
ಬಿಜೆಪಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಭಾರಿ ಅಶೋಕ್ ಮೂರ್ತಿಯವರು ಮಾತನಾಡಿ 2ನೇ ಸುತ್ತಿನ ಮನೆ ಮನೆ ಪ್ರಚಾರ ಹಾಗೂ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಹಾ ಶಕ್ತಿ ಕೇಂದ್ರದ ಪ್ರಭಾರಿ ಸುರೇಶ್ ಬಟ್ವಾಡಿ, ಮಹಾ ಶಕ್ತಿ ಕೇoದ್ರದ ಅಧ್ಯಕ್ಷ ಗೋಪಾಲಕೃಷ್ಣ ಕಲ್ಮಕ್ಕಿ, ಶಕ್ತಿ ಕೇoದ್ರಗಳ ಅಧ್ಯಕ್ಷರುಗಳಾದ ಸಂಜೀವ ಮೊಗವೀರ, ನಾರಾಯಣ ದೇವಾಡಿಗ, ಕೃಷ್ಣ ದೇವಾಡಿಗ, ಸುಕೇಶ್ ಪೂಜಾರಿ, ದಿವಾಕರ್ ಶೆಟ್ಟಿ ನೆಲ್ಯಾಡಿ, ವಿಠಲ್ ಶೆಟ್ಟಿ, ಬೂತ್ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.