2026 ಮಾರ್ಚ್ ತಿಂಗಳಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆ ನೂರು ಶೇಕಡಾ ಫಲಿತಾಂಶವನ್ನು ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 67 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮೂವರು ಅತ್ಯುತ್ತಮ ದರ್ಜೆಯಲ್ಲಿ, 40 ಮಂದಿ ಪ್ರಥಮ ದರ್ಜೆಯಲ್ಲಿ, 14 ಮಂದಿ ದ್ವಿತೀಯ ದರ್ಜೆಯಲ್ಲಿ ಹಾಗೂ ಉಳಿದ ಹತ್ತು ಮಂದಿ ತೇರ್ಗಡೆಯನ್ನು ಹೊಂದಿರುತ್ತಾರೆ.
ಅವರಲ್ಲಿ ಬಿಂದುಶ್ರೀ 550 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು, ಸುದೇಶ್ 542 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು, ಆಕಾಶ್ 541 ಅಂಕಗಳೊಂದಿಗೆ ಮೂರನೇ ಸ್ಥಾನವನ್ನು ಶಾಲೆಯಲ್ಲಿ ಪಡೆದುಕೊಂಡಿರುತ್ತಾರೆ ಎಂದು ಶಾಲಾ ಸಂಚಾಲಕರು ಹಾಗೂ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ. ನೂರು ಶೇಕಡ ಫಲಿತಾಂಶಕ್ಕೆ ಕಾರಣರಾದ ಎಲ್ಲಾಅಧ್ಯಾಪಕ ಬಂಧುಗಳನ್ನು ಸಂಚಾಲಕರು, ಅಧ್ಯಕ್ಷರು ಅಭಿನಂದಿಸಿದಾರೆ.

