Monday, February 17, 2025
Homeಮಂಗಳೂರುಕೆ.ಸಿ.ರೋಡು ಬ್ಯಾಂಕ್ ದರೋಡೆ ಹಿನ್ನಲೆ : ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ...

ಕೆ.ಸಿ.ರೋಡು ಬ್ಯಾಂಕ್ ದರೋಡೆ ಹಿನ್ನಲೆ : ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಖಡಕ್ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು, ಜನವರಿ 17, 2025 : ಉಳ್ಳಾಲ ತಾಲೂಕಿನ ಕೆ ಸಿ ರೋಡು ಜಂಕ್ಷನ್ನಿನಲ್ಲಿರುವ ಕೋಟೆಕರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೆಂಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿ ಶೀಘ್ರ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ವೇಳೆ ಪೊಲೀಸ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ ದರೋಡೆ ಮಾಡಿ ಆರೋಪಿಗಳು ಇಷ್ಟು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟೆಲ್ಲಾ ಟೋಲ್ ಗಳನ್ನು ದಾಟಿ ಹೋಗಿದ್ದಾರೆ, ತಕ್ಷಣ ಟೋಲ್ ಗಳನ್ನು ಏಕೆ ಬಿಗಿ ಮಾಡಲಿಲ್ಲ? ಎಂದು ಪ್ರಶ್ನಿಸಿರುವ ಸಿಎಂ ಸಿದ್ದರಾಮಯ್ಯ ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular