ಬನ್ನಿ ಸ್ವಚ್ಛ ಭಾರತ ನಿರ್ಮಾಣಕ್ಕೆ ಪಣ ತೊಡಿ “
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ., ಉಡುಪಿ ಇಂಡಸ್ಟ್ರಿ ಯಲ್ ಕೋ- ಆಪರೇಟಿವ್ ಸೊಸೈಟಿ ನಿ., ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ.,ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಮಲ್ಪೆ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರು, ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀಯುತ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಆಡಳಿತ ಮಂಡಳಿ ಸದಸ್ಯರು, ಉಡುಪಿ ಇಂಡಸ್ಟಿçಯಲ್ ಕೋ- ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು. ಸಂಯುಕ್ತ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Home Uncategorized ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಉಡುಪಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

