Wednesday, February 19, 2025
HomeUncategorizedಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪುನವದುರ್ಗಾ ಲೇಖನ ಯಜ್ಞ...

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು
ನವದುರ್ಗಾ ಲೇಖನ ಯಜ್ಞ ಸಂಕಲ್ಪ ಕಾರ್ಯಕ್ರಮ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸÊಾಟಿ, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾರ್ಯಕ್ರಮವಾದ ನವದುರ್ಗಾ ಲೇಖನಯಜ್ಞದ ಸಂಕಲ್ಪ ಕಾರ್ಯಕ್ರಮವು ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಇಂದು ಜರಗಿತು. ವಿವಿಧ ಸಹಕಾರ ಸಂಸ್ಥೆಗಳ ೯ ಸ್ತ್ರೀಯರು ನವದೀಪವನ್ನು ಪ್ರಜ್ವಲಿಸಿ ದೇವಿಗೆ ಆರತಿ ಬೆಳಗಿಸಿದರು. ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮನೋಹರ್ ಎಸ್. ಶೆಟ್ಟಿಯವರು ಪವಾಡ ಸದೃಶ ರೀತಿಯಲ್ಲಿ ಬೆಳಗುತ್ತಿರುವ ಕಾಪು ಮಾರಿಯಮ್ಮನ ಸಾನಿಧ್ಯದ ಕುರಿತು ವಿವರಿಸಿದರು. ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್‌ರವರು ಲೇಖನ ಯಜ್ಞದ ಕೈಗೊಳ್ಳುವ ವಿಧಾನ ಹಾಗೂ ಅದರ ಫಲದ ಬಗ್ಗೆ ತಿಳಿಸಿದರು. ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಸುವರ್ಣ, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೆಟ್ಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಪ್ರಧಾನ ವ್ಯವಸ್ಥಾಪಕಾರದ ಅಶೋಕ್ ಭಟ್, ಈ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.. ಬಡಗಬೆಟ್ಟು ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ವಂದಿಸಿದರು.

RELATED ARTICLES
- Advertisment -
Google search engine

Most Popular