ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಸತತ 19ನೇ ಬಾರಿಗೆ ಸಾಧನಾ ಪ್ರಶಸ್ತಿ

0
108

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆ. 30ರಂದು ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ 19ನೇ ಬಾರಿಗೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ “ಸಾಧನಾ ಪ್ರಶಸ್ತಿ 2024-25” ಲಭಿಸಿರುತ್ತದೆ.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ರವರು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಇವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ನಿರ್ದೇಶಕರಾದ ಉಮಾನಾಥ ಎಲ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here