ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗುತ್ತಿದೆ. ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಮಾನ್ಯ ಲೋಕೋಪಯೋಗಿ ಸಚಿವರಿಗೆ ವಿನಂತಿಸಿದ್ದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು, ಆಗಸ್ಟ್ 22 ರಂದು ಸದನದಲ್ಲಿ ಲೋಕೋಪಯೋಗಿ ಸಚಿವರ ಅನುಪಸ್ಥಿತಿಯಲ್ಲಿ ರಾಜ್ಯದ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಉತ್ತರಿಸಿ, ಮಳೆ ನಿಂತ ಕೂಡಲೇ ಅನುದಾನವನ್ನು ಒದಗಿಸಿ ಕಾಮಗಾರಿಯನ್ನು ಆರಂಭಿಸುವುದಾಗಿ ಆಶ್ವಾಸನೆ ನೀಡಿದ ಮಾನ್ಯ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.
