ಮೂಡುಬಿದಿರೆಯ ಪ್ರಸಿದ್ಧ ನ್ಯಾಯವಾದಿ, ಎಂ.ಪ್ರಸಾದ್ ಅವರ ಶಾರದಾನುಗ್ರಹ 20625 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮೂಡುಬಿದಿರೆ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ
ಆನುವಂಶಿಕ ಆಡಳಿತ ಮೊಕ್ತೇಸರರಾದ ಅಶೋಕ್ ಕಾಮತ್ ಅವರು ತಿಳಿಸಿರುತ್ತಾರೆ.
ಪ್ರತಿ ವರ್ಷದಂತೆ ಸೆಪ್ಟೆಂಬರ್ 30ರಂದು ನಡೆಯುವ ಪೊನ್ನೆಚಾರಿ ಶಾರದಾ ಮಹೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಅವರು ಪತ್ರಿಕೆಗೆ ತಿಳಿಸಿರುತ್ತಾರೆ.
ಬಾಹುಬಲಿ ಪ್ರಸಾದ್ ರವರು ಕಾನೂನು ಸಹಕಾರ ಶೈಕ್ಷಣಿಕ ಸಾಮಾಜಿಕ ರಾಜಕೀಯ ಧಾರ್ಮಿಕ ಕ್ಷೇತ್ರಗಳಲ್ಲಿ ಅನುಪಮಾ ಸೇವೆಯನ್ನು ಸಲ್ಲಿಸಿರುತ್ತಾರೆ. ಇವರ ಬಹುಮುಖ ಸೇವೆಯನ್ನು ಗುರುತಿಸಿ ರಾಷ್ಟ್ರಮಟ್ಟದ ಭಾರತ್ ಸೇವಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಇವರ ಸಹಕಾರ ಕ್ಷೇತ್ರದ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಕಲ್ಲಬೆಟ್ಟು ಕರಿಂಜೆ ಮಾರೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾರದಾನುಗ್ರಹ ಪ್ರಶಸ್ತಿಗೆ ಭಾಜನರಾದ ಬಾಹುಬಲಿ ಪ್ರಸಾದ್ ಅವರಿಗೆ ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ
ಡಾ.ರಾಮಕೃಷ್ಣ ಶಿರೂರು ಅಭಿನಂದನೆ ಸಲ್ಲಿಸಿರುತ್ತಾರೆ.