Monday, July 15, 2024
Homeರಾಜ್ಯಪ್ರಜ್ವಲ್‌ ರೇವಣ್ಣಗೆ ಮುಂದುವರಿದ ಸಂಕಷ್ಟ: ಅತ್ಯಾಚಾರ ಪ್ರಕರಣದ ಜಾಮೀನು ಅರ್ಜಿ ವಜಾ

ಪ್ರಜ್ವಲ್‌ ರೇವಣ್ಣಗೆ ಮುಂದುವರಿದ ಸಂಕಷ್ಟ: ಅತ್ಯಾಚಾರ ಪ್ರಕರಣದ ಜಾಮೀನು ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿರಿಸಿತ್ತು. ಆದರೆ ಇಂದು ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular