Sunday, July 14, 2024
Homeಅಪರಾಧಬಿಜೆಪಿ ವಿರುದ್ಧದ 40% ಜಾಹೀರಾತಿಗೆ ಸಂಬಂಧಿಸಿದ ಮಾನನಷ್ಟ ಪ್ರಕರಣ: ರಾಹುಲ್‌ ಗಾಂಧಿಗೆ ಜಾಮೀನು

ಬಿಜೆಪಿ ವಿರುದ್ಧದ 40% ಜಾಹೀರಾತಿಗೆ ಸಂಬಂಧಿಸಿದ ಮಾನನಷ್ಟ ಪ್ರಕರಣ: ರಾಹುಲ್‌ ಗಾಂಧಿಗೆ ಜಾಮೀನು

ಬೆಂಗಳೂರು: ಬಿಜೆಪಿ ವಿರುದ್ಧದ 40% ಜಾಹೀರಾತು ವಿಷಯದಲ್ಲಿ ದಾಖಲಾಗಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಗೆ ಶುಕ್ರವಾರ ಜಾಮೀನು ಮಂಜೂರಾಗಿದೆ. 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜು. 30ಕ್ಕೆ ವಿಚಾರಣೆ ಮುಂದೂಡಿದೆ.
ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರು ರಾಹುಲ್‌ ಗಾಂಧಿಗೆ 50,000 ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ಕೊಟ್ಟಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಜೂ. 1ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ರಾಹುಲ್‌ ಗಾಂಧಿ ಅವರಿಗೆ ಜೂ. 7ರಂದು ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಆದೇಶಿಸಿತ್ತು. ಇಂದು ರಾಹುಲ್‌ ಗಾಂಧಿಯವರು ಕೋರ್ಟಿಗೆ ಹಾಜರಾದ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

RELATED ARTICLES
- Advertisment -
Google search engine

Most Popular