ರಾಂಚಿ: ಭೂಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ರಾಂಚಿಯ ವಿಶೇಷ ಪಿಎಂಎಲ್ ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೊರೇನ್ ಬಂಧಿತರಾಗಿದ್ದಾರೆ.
ತಮ್ಮ ಚಿಕ್ಕಪ್ಪನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸೊರೇನ್ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.
ಸುಮಾರು 600 ಕೋಟಿ ರೂ. ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಜನವರಿಯಲ್ಲಿ ಬಂಧಿಸಿತ್ತು.