ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ನೀರಿನ ಲಭ್ಯತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುವ್ಯವಸ್ಥಿತ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ್ರಸ್ತುತ ನೀರಿನ ಲಭ್ಯತೆಯಂತೆ ಈ ವಾರ ಪೂರ್ತಿ ನಿರಂತರ ನೀರು ಪೂರೈಕೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಮುಂದಿನ ವಾರದ ಲಭ್ಯತೆ ಪರಿಗಣಿಸಿ ರೇಷನಿಂಗ್ ವ್ಯವಸ್ಥೆಯ ಬಗ್ಗೆ ನಿರ್ಧರಿಸುವಂತೆ ತಿಳಿಸಿದರು. ನಗರ ಸಭೆ ವ್ಯಾಪ್ತಿಯ ಸಾರ್ವಜನಿಕ ಬಾವಿ ಹಾಗೂ ಕೊಳವೆ ಬಾವಿ ಮುಂತಾದ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಕೆ ಹಾಗೂ ಈಗಾಗಲೇ ಟ್ಯಾಂಕರ್ ನೀರು ಸರಬರಾಜು ಟೆಂಡರ್ ಪಡೆದ ಗುತ್ತಿಗೆದಾರರ ಮೂಲಕ ಅವಶ್ಯಕ ಪ್ರದೇಶಗಳಿಗೆ ನೀರು ಒದಗಿಸಲು ತಿಳಿಸಿದರು. ನಾಳೆ ವಾರಾಹಿ ಕುಡಿಯುವ ನೀರಿನ ಯೋಜನೆಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ವಾರಾಹಿ ನೀರು ಸರಬರಾಜು ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ, ಪ್ರಭಾಕರ ಪೂಜಾರಿ, ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ಶ್ರೀ ಸುಂದರ ಕಲ್ಮಾಡಿ, ನಗರ ಸಭೆ ಎ ಇ ಇ ಯಶವಂತ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು.