Saturday, July 20, 2024
Homeರಾಜ್ಯಬಾಲ ವಿಕಾಸ ಶಿಬಿರವು ಮಕ್ಕಳ ನೈತಿಕ ಮೌಲ್ಯಗಳನ್ನು ಜಾಗೃತಿಗೊಳಿಸಲು ಸಹಕಾರಿ - ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್

ಬಾಲ ವಿಕಾಸ ಶಿಬಿರವು ಮಕ್ಕಳ ನೈತಿಕ ಮೌಲ್ಯಗಳನ್ನು ಜಾಗೃತಿಗೊಳಿಸಲು ಸಹಕಾರಿ – ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್

ಕಿನ್ನಿಗೋಳಿ: ಮಕ್ಕಳಲ್ಲಿನ ಸೃಜನಶೀಲತೆ, ಕೌಶಲ ಹಾಗೂ ಕಲಿಕಾ ಮನೋಭಾವ ಹೆಚ್ಚಿಸಲು ಬಾಲ ವಿಕಾಸ ಶಿಬಿರ ಸಹಕಾರಿಯಾಗಿದೆ. ಈ ಶಿಬಿರದಲ್ಲಿ ಎಲ್ಲಾ ಶಿಬಿರಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯ ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್ ಹೇಳಿದರು.ಅವರು ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ ಉಚಿತವಾಗಿ ಆಯೋಜಿಸಿದ ಬಾಲ ವಿಕಾಸ ಶಿಬಿರ – 2024ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದ ಖ್ಯಾತ ಯೋಗ ಗುರುಗಳಾದ ಜಯ ಮುದ್ದು ಶೆಟ್ಟಿ, ಶ್ಲೋಕ ಕಂಠಪಾಠ ಮಾಡಿಸಿದ ಶಿಮಂತೂರು ಶ್ರೀ ಶಾರದ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ಜಿತೇಂದ್ರ ವಿ.ರಾವ್ ಹೆಜಮಾಡಿ, ಅಭಿನಯ ತರಬೇತಿಯನ್ನು ನೀಡಿದ ರಂಗನಟ ಹಾಗೂ ನಿರ್ದೇಶಕರಾದ ತಾರನಾಥ ಊರ್ವ, ಆವೆ ಮಣ್ಣಿನ ಕಲಾಕೃತಿ ರಚನೆ ಮತ್ತು ಕರಕುಶಲ ತರಬೇತಿಯನ್ನು ನೀಡಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಿ ಫಲಿಮಾರು, ಭಜನೆ ತರಬೇತಿಯನ್ನು ನೀಡಿದ ಗಾಯಕರಾದ ಸುರೇಶ್ ಆಚಾರ್ಯ ಹಳೆಯಂಗಡಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು ಹಾಗೂ ಶಿಬಿರದಲ್ಲಿ ಪಾಲ್ಗೊಂಡ 80 ಶಿಬಿರಾರ್ಥಿಗಳಿಗೆ ನೆನಪಿನಕಾಣಿಕೆ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.

ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕರಾದ ವೇ.ಮೂ ಲಕ್ಷ್ಮೀನಾರಾಯಣ ಆಸ್ರಣ್ಣರು ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭ ಮೂಲ್ಕಿಯ ಶ್ರೀ ವ್ಯಾಸಮಹರ್ಷಿ ವಿದ್ಯಾಪೀಠದ ಪ್ರಾಂಶುಪಾಲ ಚಂದ್ರಿಕಾ ಭಂಡಾರಿ , ಪುನರೂರು ಪ್ರತಿಷ್ಠಾನದ ಗೌರವ ಆಧ್ಯಕ್ಷ ಎಚ್.ಕೆ.ಉಷಾರಾಣಿ, ಕೋಶಾಧಿಕಾರಿ ಚಂದ್ರಿಕಾ ಸುಧೀರ್, ಜನವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷ ಶಶಿಕರ ಕೆರೆಕಾಡು ,ಜನವಿಕಾಸ ಸಮಿತಿ ಮೂಲ್ಕಿಯ ಪದಾಧಿಕಾರಿಗಳಾದ ಸುರೇಶ್ ರಾವ್ ನಿರಳಿಕೆ, ದಾಮೋದರ ಶೆಟ್ಟಿ ಕೊಡೆತ್ತೂರು, ಅಕ್ಷತಾ ಶೆಟ್ಟಿ, ಜೀವನ್ ಶೆಟ್ಟಿ, ಪ್ರಾಣೇಶ್ ಭಟ್ ದೇಂದಡ್ಕ ಉಪಸ್ಥಿತರಿದ್ದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಪ್ರಾಸ್ತಾವಿಕವಾಗಿ ಮಾತಾಡಿ ಅತಿಥಿಗಳನ್ನು ಸ್ವಾಗತಿಸಿದರು.ಜನವಿಕಾಸ ಸಮಿತಿ ಮೂಲ್ಕಿಯ ಪ್ರಧಾನ ಕಾರ್ಯದರ್ಶಿ ಗೀತಾ ಶೆಟ್ಟಿ ವಂದಿಸಿದರು, ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular