‘ಬಲೆ ತುಳು ಓದುಗ’; ನಾಳೆ(ನ.5) ಅಕಾಡೆಮಿಗೆ  ಚೇಳೈರು ಪ. ಪೂ. ಕಾಲೇಜಿನ ವಿದ್ಯಾರ್ಥಿಗಳ  ಭೇಟಿ

0
10

       ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹನ್ನೊಂದನೇ  ಕಾರ್ಯಕ್ರಮ ನ.5 ರಂದು ನಡೆಯಲಿದೆ.

 ಬುಧವಾರದಂದು ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ  30 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.

ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಜ್ಯೋತಿ ಚೇಳೈರು ಅವರು  ಉದ್ಘಾಟಿಸಿ,ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಪ್ರಧಾನ ಕಾರ್ಯದರ್ಶಿ ಯಶೋದಾ ಮೋಹನ್ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಚಂದ್ರನಾಥ ಎಂ.,ವಿದ್ಯಾರ್ಥಿ ಸಂಚಾಲಕಿ ಅಕ್ಷತಾ, ಅಕಾಡೆಮಿಯ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ  ಉಪಸ್ಥಿತರಿರುವರು   ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here