ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಒಂಭತ್ತನೇ ಕಾರ‍್ಯಕ್ರಮ ಸೆ.13 ರಂದು ನಡೆಯಲಿದೆ.
ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜ್ಮೆಂಟ್ ನ ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ‍್ಯಕ್ರಮವನ್ನು ಬೆಳಿಗ್ಗೆ ೧೦.೦೦ ಗಂಟೆಗೆ ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜ್ಮೆಂಟ್ ನ ಪ್ರಾಂಶುಪಾಲರಾದ ವಂ. ಅರುಣ್ ವಿಲ್ಸನ್ ಲೋಬೊ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಉಪ ಪ್ರಾಂಶುಪಾಲರಾದ ಪ್ರೊ. ರೋಶನ್ ವಿನ್ಸಿ ಸಾಂತುಮಯೋರ್ ಭಾಗವಹಿಸುವರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

