ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ “ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ” ಅಭಿಯಾನದ ಹತ್ತನೆ ಕಾರ್ಯಕ್ರಮ ಅ. 17 ರಂದು ನಡೆಯಲಿದೆ.
ಶುಕ್ರವಾರದಂದು ಶಾರದಾ ಕಾಲೇಜು ತಲಪಾಡಿ ಇಲ್ಲಿನ ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10:00 ಗಂಟೆಗೆ ನಿವೃತ್ತ ಉಪನ್ಯಾಸಕ ಹಾಗೂ ಹಿರಿಯ ಸಾಹಿತಿ ಭಾಸ್ಕರ್ ರೈ ಕುಕ್ಕುವಳ್ಳಿ ಅವರು ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸುವರು. ಮುಖ್ಯ ಅತಿಥಿಯಾಗಿ ಶಾರದಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಮೀನ ಜೆ. ಪಣಿಕ್ಕರ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಕಾಲೇಜಿನ ಕನ್ನಡ ವಿಭಾಗದ ಪ್ರಾದ್ಯಾಪಕಿ ಅಮಿತಾ ಆಳ್ವ , ವಿದ್ಯಾರ್ಥಿ ಸಂಚಾಲಕಿ ವರ್ಷ ವಿ.ಎಸ್ , ಅಕಾಡೆಮಿ ಸದಸ್ಯ ಪಾಂಗಾಳ ಬಾಬು ಕೊರಗ ಉಪಸ್ಥಿತರಿರುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.