ಬಲೆ ತುಳು ಓದುಗ ಅಭಿಯಾನ’ ಇಂದು (ಎ.29) ಅಕಾಡೆಮಿಗೆ ಮುಡಿಪು ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ

0
106

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ನಾಲ್ಕನೇ ಕರ‍್ಯಕ್ರಮ ಎ.29 ರಂದು ನಡೆಯಲಿದೆ. ಮಂಗಳವಾರದಂದು ಮುಡಿಪು ಸರಕಾರಿ ಪ್ರಥಮ ರ‍್ಜೆ ಕಾಲೇಜಿನ 35 ವಿದ್ಯಾರ್ಥಿಗಳು ರ‍್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ‍್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಲೇಖಕಿ ಹಾಗೂ ಶಿಕ್ಷಕಿ ಸುಧಾ ನಾಗೇಶ್ ಅವರು ಉದ್ಘಾಟಿಸಿ,ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರರ‍್ತ ಪುಷ್ಪರಾಜ್ ಬಿ.ಎನ್. ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಸರಕಾರಿ ಪ್ರಥಮ ರ‍್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ತನುಜ ಎಂ. ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here