ಶ್ರೀ ಕೃಷ್ಣ ಮಠದಲ್ಲಿ ಬಲೀಂದ್ರ ಪೂಜೆ ಕನಕ ಗೋಪುರದ ಎದುರಿನಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀ ಮಠದ ಪುರೋಹಿತರಾದ ಸುದರ್ಶನ ಆಚಾರ್ಯ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಶ್ರೀ ಮಠದ ಭಕ್ತರು ಉಪಸ್ಥಿತರಿದ್ದರು.

