Monday, February 10, 2025
Homeಸಿನಿಮಾಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ಗೆ ಕೂಲಿಂಗ್‌ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಭದ್ರತಾ ಸಿಬ್ಬಂದಿ ವಿರುದ್ಧ...

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ಗೆ ಕೂಲಿಂಗ್‌ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಡಿಐಜಿ ಸೂಚನೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ಪಡೆದ ಆರೋಪದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧಿತನಾಗಿದ್ದ ನಟ ದರ್ಶನ್​ರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಗಿದೆ. ಆದರೆ ಬಳ್ಳಾರಿ ಜೈಲಿನಲ್ಲಿಯೂ ಯಡವಟ್ಟು ಆಗಿದೆ. ದರ್ಶನ್​ ಎಂಟ್ರಿ ನೀಡುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ನಟನಿಗೆ ಕೂಲಿಂಗ್​ ಗ್ಲಾಸ್​ ಧರಿಸಲು ಭದ್ರತಾ ಸಿಬ್ಬಂದಿ ಅನುಮತಿ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕರ್ತವ್ಯ ಲೋಪ ಎಸಗಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರಾಗೃಹ ಇಲಾಖೆಯ ಡಿಜಿಪಿಗೆ ಡಿಐಜಿ ಟಿ.ಪಿ. ಶೇಷ ಅವರು ಪತ್ರ ಬರೆದಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನಿಂದ ಹೊರಟು ಬಳ್ಳಾರಿ ಜೈಲು ತಲುಪಿದ ದರ್ಶನ್​ ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ, ಸ್ಟೈಲಿಶ್​​ ಲುಕ್​ನಲ್ಲಿ ಕಾಣಿಸಿಕೊಂಡರು. ಅವರಿಗೆ ಕೂಲಿಂಗ್​ ಗ್ಲಾಸ್​ ಧರಿಸಲು ಏಕೆ ಅನುಮತಿ ನೀಡಲಾಯಿತು ಎಂಬ ಪ್ರಶ್ನೆ ಉದ್ಭವ ಆಗಿತ್ತು.
ಜೈಲಿನ ನಿಯಮಾನುಸಾರ ಮುಖ್ಯ ದ್ವಾರದಲ್ಲಿ ಸ್ವಂತ ವಸ್ತುಗಳನ್ನು ಒಪ್ಪಿಸಬೇಕು. ಆದರೆ ದರ್ಶನ್​ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ್ದರಿಂದ ಕರ್ತವ್ಯಲೋಪ ಆಗಿದೆ. ಈ ಹಿನ್ನೆಲೆಯಲ್ಲಿ, ದರ್ಶನ್ ಅವರನ್ನು ಕರೆತಂದ ಭದ್ರತಾ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಪತ್ರ ಬರೆದಿದ್ದಾರೆ. ಶಿಸ್ತು ಕ್ರಮ ಜರುಗಿಸಲು ಮಾನ್ಯ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ದರ್ಶನ್​ ಕೈಕುಲುಕಲು ನಿರಾಕರಿಸಿದ ಅಧಿಕಾರಿ:
ಬಳ್ಳಾರಿ ಜೈಲ್​ ಒಳಗೆ ಹೋಗುವಾಗ ಪೊಲೀಸ್ ಸಿಬ್ಬಂದಿಗೆ ಹಸ್ತಲಾಘವ ಮಾಡಲು ದರ್ಶನ್ ಮುಂದಾದರು. ಇದೇ ವೇಳೆ ಬೆಂಗಳೂರು ಜೈಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬಂದಿದ್ದ ಎಸಿಪಿಗೆ ಶೇಕ್​ ಹ್ಯಾಂಡ್​ ನೀಡಲು ದರ್ಶನ್​ ಪ್ರಯತ್ನಿಸಿದರು. ಆದರೆ ದರ್ಶನ್​ ಜೊತೆ ಕೈ ಕುಲುಕಲು ಪೊಲೀಸ್ ಅಧಿಕಾರಿ ನಿರಾಕರಿಸಿದರು ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular