ಬಂದಾರು : ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಪುರುಷೋತ್ತಮ.ಜಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಜನಾರ್ಧನ ಗೌಡ ನಿರುoಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಸೇವಾಪ್ರತಿನಿಧಿ ಚಂದ್ರಕಲಾ, ಅರ್ಚಕರು, ಜಾತ್ರೋತ್ಸವ ಸಮಿತಿ,ಅಭಿವೃದ್ಧಿ ಸಮಿತಿ,ಯಕ್ಷಗಾನ ಸಮಿತಿ ಹಾಗೂ ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು, ಸರ್ವ ಸದಸ್ಯರು ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

