ಬಂದಾರು : ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ LCRP ಭಾಗ್ಯಶ್ರೀ ಇವರು ನಿರೂಪಣೆ ಮಾಡಿದರು , ಪ್ರಾರ್ಥನೆ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಎಂವಿಕೆ ಮೇಘನ ರವರು ಎಲ್ಲರನ್ನು ಸ್ವಾಗತಿಸಿದರು , LCRP ಪವಿತ್ರ ಇವರು ಜಮಾ-ಖರ್ಚು ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು . MBK ಮೇಘನ ಇವರು ವಾರ್ಷಿಕ ವರದಿ ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು ನಂತರ NRLM ನ ಬೆಳ್ತಂಗಡಿ ತಾ. ಪಂ. ನ ವಲಯ ಮೇಲ್ವೀಚಾರಕಿ ವೀಣಾ ಇವರು NRLM ಸಂಜೀವಿನಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು ನಂತರ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಾಜ್ಯ ಮಟ್ಟದ ಸಾಹಿತ್ಯ ಕ್ಷೇತ್ರದಲ್ಲಿ ಕವನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧೃತಿ ND ಇವರಿಗೆ ಗ್ರಾ.ಪಂ ಹಾಗೂ ಒಕ್ಕೂಟದ ವತಿಯಿಂದ ಸನ್ಮಾನ ಮಾಡಲಾಯಿತು. ನಂತರ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ತಾಲೂಕು ಪಂಚಾಯತ್ ನ NRLM ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಮೇಡಂ ನೆರವೇರಿಸಿ ಕೊಟ್ಟರು. B C ಸಖಿ ಲಕ್ಷ್ಮೀ ಇವರು ವಂದನಾರ್ಪಣೆ ಮಾಡಿದರು . ಮಾಜಿ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಿ ಬೀಳ್ಕೊಡುಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾವತಿ ಹಾಗೂ ಗ್ರಾ.ಪಂ ನ ಸದಸ್ಯರು ಮತ್ತು ಸಂಜೀವಿನಿ ಸಂಘಗಳ ಸದಸ್ಯರುಗಳು ಹಾಜರಿದ್ದರು, ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.