Wednesday, April 23, 2025
HomeUncategorizedಬಂದಾರು: ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ ಗೊನೆ ಮುಹೂರ್ತ, ತೋರಣ ಮುಹೂರ್ತ,ಧ್ವಜಾರೋಹಣ

ಬಂದಾರು: ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ ಗೊನೆ ಮುಹೂರ್ತ, ತೋರಣ ಮುಹೂರ್ತ,ಧ್ವಜಾರೋಹಣ

ಬಂದಾರು: ಎ 03 ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪರಮಪೂಜ್ಯ ಧರ್ಮಸ್ಥಳ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಗೌರವಾಧ್ಯಕ್ಷರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಎಪ್ರಿಲ್ 03 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾ ಪೂಜೆ ಪ್ರಸಾದ ವಿತರಣೆ, ರಾತ್ರಿ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮವು ಚೆಂಡೆವಾದನ,ಸಿಡಿಮದ್ದುಗಳ ಸದ್ದಿನೊಂದಿಗೆ ವಿವಿಧ ವೈದಿಕ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ವೆಂಕಟ್ರಮಣ ಗೌಡ ಬಾಳೆಹಿತ್ತಿಳು, ದಮಯಂತಿ ಪಾಂಜಾಳ, ಲಕ್ಷಣ ನಾಯ್ಕ ಮುoಡೂರು, ನಿರಂಜನ ಗೌಡ ನಡುಮಜಲು, ಶರತ್ ಮುರ್ತಾಜೆ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ,ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಅಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ, ಅರ್ಚಕರಾದ ಭೀಮ್ ಭಟ್ ಹಾಗೂ ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular