Tuesday, April 29, 2025
Homeರಾಜ್ಯತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿನಲ್ಲೇ ಮ್ಯಾನೇಜರ್‌ ಆತ್ಮಹತ್ಯೆಗೆ ಶರಣು

ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿನಲ್ಲೇ ಮ್ಯಾನೇಜರ್‌ ಆತ್ಮಹತ್ಯೆಗೆ ಶರಣು

ಮಡಿಕೇರಿ: ಬ್ಯಾಂಕ್‌ ಮ್ಯಾನೇಜರ್‌ ಒಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯ ರಾಷ್ಟ್ರೀಕೃತ ಬ್ಯಾಂಕ್‌ ಒಂದರ ಶಾಖೆಯಲ್ಲಿ ಮ್ಯಾನೇಜರ್‌ ವಿಜು (46) ಎಂಬವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತಃ ಕೇರಳದ ಆಲಪುಝ ಆಯಿಕ್ಕಾಡ್‌ ಚಿಂಗೋಲಿ ಗ್ರಾಮದ ನಿವಾಸಿಯಾದ ವಿಜು, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕಿನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular