ಬನ್ನಡ್ಕ : ಮೇ. 31ರಂದು ರಸ್ತೆ ಸುರಕ್ಷತೆಗಾಗಿ ನಾಗರಿಕ ವೇದಿಕೆಯಿಂದ ಬೃಹತ್ ಪ್ರತಿಭಟನೆ

0
8

ಮೂಡುಬಿದಿರೆ : ಬನ್ನಡ್ಕ ರಸ್ತೆಯಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಸರಣಿ ಅಪಘಾತಗಳನ್ನು ಖಂಡಿಸಿ ಹಾಗೂ ತಕ್ಷಣ ರಸ್ತೆ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಮೇ 31ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.

ನಾಗರಿಕ ವೇದಿಕೆ ಬನ್ನಡ್ಕ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಗೆ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

ಸ್ಥಳೀಯರ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಈ ರಸ್ತೆಯಲ್ಲಿ ಒಟ್ಟು 25 ಭೀಕರ ಅಪಘಾತಗಳು ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕ ಸುರಕ್ಷತಾ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

“ಇನ್ನೊಂದು ಅಮಾಯಕ ಜೀವ ಹೋಗುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ರಸ್ತೆ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

“ನಿರ್ಲಕ್ಷ್ಯ ಬಿಟ್ಟು ಸುರಕ್ಷತೆ ನೀಡಿ”, “ಜನರ ಜೀವ ಅತ್ಯಂತ ಅಮೂಲ್ಯ” ಎಂಬ ಘೋಷಣೆಗಳೊಂದಿಗೆ ಬನ್ನಡ್ಕ ದೈವಸ್ಥಾನದ ಬಳಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here