ಬನ್ನಂಜೆ ನಾರಾಯಣಗುರು ವೃತ್ತ ತೆರವಿಗೆ ಖಂಡನೆ

0
98

ಉಡುಪಿ: ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬನ್ನಂಜೆ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿ ಬ್ಯಾಂಕ್​ ಆಫ್​ ಬರೋಡ ನಾಮಫಲಕದ ವೃತ್ತ ರಚಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗಿದೆ.

2022ರಲ್ಲಿ ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಬರುವ ವೃತ್ತ ಹಾಗೂ ಜಂಕ್ಷನ್​ಗಳಿಗೆ ಮಹಾಪುರುಷರ ಹಾಗೂ ಗಣ್ಯವ್ಯಕ್ತಿಗಳ ಹೆಸರುಗಳನ್ನು ಪದನಾಮಕರಣ ಮಾಡುವ ಬಗ್ಗೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ರ್ನಿಣಯಿಸಿ ತೀಮಾರ್ನ ಕೈಗೊಳ್ಳಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಸರ್ಕಾರಕ್ಕೆ ವರದಿ ಸಲ್ಲಿಸಿ ಬಳಿಕ ಕರ್ನಾಟಕ ಪುರಸಭೆಗಳ ಅಧಿನಿಯಮದ ಅನ್ವಯದಂತೆ ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ವೃತ್ತಗಳಿಗೆ, ಜಂಕ್ಷನ್​ ಗಳಿಗೆ ಮಹಾಪುರುಷರ ಹಾಗೂ ಗಣ್ಯವ್ಯಕ್ತಿಗಳ ಹೆಸರುಗಳನ್ನು ಪದನಾಮಕರಣ ಮಾಡಲು ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು. ಬನ್ನಂಜೆ ಸರ್ಕಲ್​ ಗೆ “ನಾರಾಯಣಗುರು ವೃತ್ತ”, ಕಲ್ಸಂಕ ವೃತ್ತಕ್ಕೆ “ಮಧ್ವಾಚಾರ್ಯ ವೃತ್ತ”, ಡಯಾನಾ ಸರ್ಕಲ್​ ಗೆ “ವಾದಿರಾಜ ವೃತ್ತ”, ಸಂತೆಕಟ್ಟೆ ಕಲ್ಯಾಣಪುರ ರಸ್ತೆ ಜಂಕ್ಷನ್​ ಗೆ “ಕೋಟಿ – ಚೆನ್ನಯ್ಯ ವೃತ್ತ”, ಬ್ರಹ್ಮಗಿರಿ ದೊಡ್ಡ ಸರ್ಕಲ್​ ಗೆ “ಆಸ್ಕರ್​ ಫೆರ್ನಾಂಡಿಸ್​ ಸರ್ಕಲ್​” ಹಾಗೂ ಪರ್ಕಳದಿಂದ ಕೋಡಂಗೆ ಹಾಗೂ ಕೋಡಂಗೆಯಿಂದ ಸರಳಬೆಟ್ಟುಗೆ ಹಾದುಹೋಗುವ ಮಧ್ಯದಲ್ಲಿರುವ ವೃತ್ತಕ್ಕೆ “ಶ್ರೀರಾಮ ವೃತ್ತ” ಎಂದು ನಾಮಕರಣ ಮಾಡಲು ಆದೇಶಿಸಲಾಗಿತ್ತು. ಆದರೆ ಈಗ ಏಕಾಏಕಿ ನಾರಾಯಣ ಗುರು ಹೆಸರಿನ ವೃತ್ತವನ್ನು ಪೊದೆಗಳಲ್ಲಿ ಬಿಸಾಡಲಾಗಿದೆ.

ಹೋರಾಟದ ಎಚ್ಚರಿಕೆ
ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ ನಾರಾಯಣ ಗುರು ವೃತ್ತ ಎಂದು ಪದನಾಮಕರಣ ಮಾಡಿ ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು. ಆದರೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ವೃತ್ತ ತೆರವುಗೊಳಿಸಿ ಆ ಜಾಗದಲ್ಲಿ ಬ್ಯಾಂಕ್​ ಆಫ್​ ಬರೋಡ ನಾಮ ಫಲಕದ ವೃತ್ತ ರಚಿಸಿದವನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಬನ್ನಂಜೆ ವೃತ್ತದಲ್ಲಿ ನಗರ ಸಭೆ ವತಿಯಿಂದ ಸುಂದರ ನಾರಾಯಣ ಗುರು ವೃತ್ತ ನಿಮಾರ್ಣ ಮಾಡಬೇಕು. ಇಲ್ಲವಾದಲ್ಲಿ ಈ ಬಗ್ಗೆ ಹೋರಾಟ ನಡೆಸಲಾಗುವುದು ಎಂದು ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್​  ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here