ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಫೀಕ್ ಯಾನೆ ಮಹಮ್ಮದ್ ಅಫೀಕ್ (19) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಹೇಳಿ ಅಲ್ಲಿ ಮೂವರು ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿತ್ತು. ಪ್ರಮುಖ ಆರೋಪಿ ನಾಪತ್ತೆಯಾಗಿದ್ದ. ಇದೀಗ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಅಫೀಕ್ ಬಂಧನವಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.