ಬಂಟ್ವಾಳ : ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿಕಾರ್ಯಕ್ರಮ

0
8


ಬಂಟ್ವಾಳ:
ವಿದ್ಯಾರ್ಥಿಗಳು ಪದವಿ ಅಧ್ಯಯನದ ಸಂದರ್ಭದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷಾದೃಷ್ಟಿಯಿಂದ ಅಭ್ಯಸಿಸಿದರೆ ಸರ್ಕಾರಿ ನೌಕರಿಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಆದಕಾರಣ ವಿದ್ಯಾರ್ಥಿಜೀವನದ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಂಗಳೂರಿನ ಸರ್ವಜ್ಞ ಐ.ಎ.ಎಸ್‌ಅಕಾಡೆಮಿಯ ಸ್ಥಾಪಕ ನಿರ್ದೇಶಕರಾದ ಶ್ರೀ ಸುರೇಶ್ ಎಂ.ಎ.ನುಡಿದರು.

ಇವರು ಶ್ರೀ ವೆಂಕಟರಮಣಸ್ವಾಮೀಕಾಲೇಜಿನ ಐ.ಕ್ಯು.ಎ.ಸಿ.ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ “ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ” ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

ಪ್ರಾಂಶುಪಾಲ ಪ್ರೊ.ಎಂ.ಡಿ.ಮಂಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ವೇದಿಕೆಯಲ್ಲಿ ಐ.ಕ್ಯು.ಎ.ಸಿ. ಸಂಯೋಜಕ ಡಾ.ಕಾಶೀನಾಥ ಶಾಸ್ತ್ರಿ ಹೆಚ್.ವಿ. ಉಪಸ್ಥಿತರಿದ್ದರು. ಐ.ಕ್ಯು.ಎ.ಸಿ. ಸಹಸಂಯೋಜಕಿ ಅಖಿಲಾ ಪೈ ಸ್ವಾಗತಿಸಿ, ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ವಂದಿಸಿದರು.

LEAVE A REPLY

Please enter your comment!
Please enter your name here