ಬಂಟ್ವಾಳ : ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ಸಮಾರಂಭದ ಸಮಾರೋಪ

0
35

“ವಿದ್ಯಾರ್ಥಿಗಳ ಕನಸುಗಳಿಗೆ ಆತ್ಮವಿಶ್ವಾಸದ ಬೆಳಕು ನೀಡುವವರು ಶಿಕ್ಷಕರು” — ಸ್ಮಿತೇಶ್ ಎಸ್. ಬಾರ್ಯ

ಬಂಟ್ವಾಳ: “ಮಕ್ಕಳ ಬದುಕಿನ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಶಿಕ್ಷಕರು ಪಾಠ ಮಾಡುವುದು ಮಾತ್ರವಲ್ಲದೆ. ಆಪ್ತ ಸಮಾಲೋಚಕರಾಗಿಯೂ ಕಾಣಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಅವರಿಗೆ ಸೂಕ್ತ ದಾರಿ ತೋರಿಸುವುದು ಶಿಕ್ಷಕರ ಧರ್ಮ. ಒಬ್ಬ ಉತ್ತಮ ಶಿಕ್ಷಕನು ವಿದ್ಯಾರ್ಥಿಯ ಮನಸ್ಸಿನಲ್ಲಿ ಆತ್ಮವಿಶ್ವಾಸದ ಬೆಳಕು ಹಚ್ಚುತ್ತಾನೆ; ಅವರ ಕನಸುಗಳಿಗೆ ಅರ್ಥ ನೀಡುತ್ತಾನೆ; ಜೀವನದ ದಿಕ್ಕು ತೋರಿಸುತ್ತಾನೆ. ಶಿಕ್ಷಕರ ಸಹನೆ, ಪ್ರೀತಿ ಮತ್ತು ಮಾರ್ಗದರ್ಶನವಿಲ್ಲದೆ ಸಮಾಜದ ಪ್ರಗತಿ ಸಾಧ್ಯವಿಲ್ಲ,” ಎಂದು ಆಪ್ತ ಸಮಾಲೋಚಕರಾದ ಸ್ಮಿತೇಶ್ ಎಸ್. ಬಾರ್ಯ ಹೇಳಿದರು.

ಅವರು ನವೆಂಬರ್ 9 ರಂದು ಬಂಟ್ವಾಳ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ “ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ಸಮಾರಂಭ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ “ಸಮುದಾಯ ಹಾಗೂ ಸಂಘಟನೆ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು.

ವಿದ್ಯಾರ್ಥಿ ವೇತನ ವಿತರಣೆ

ತಾಲೂಕಿನ ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ವಿಭಾಗದ 100 ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಒಟ್ಟು ₹5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ, ಖ್ಯಾತ ಎಲುಬು ತಜ್ಞ ಡಾ. ಸಂತೋಷ್ ಬಾಬು, ಕೆದ್ದೇಲುಗುತ್ತು ಶ್ರೀ ನಾಲ್ಕೆತ್ತಾಯ ಪಂಜುರ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್ ಹಾಗೂ ಉದ್ಯಮಿ ದಿನೇಶ್ ಎಂ.ಪಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಯುವಪೀಳಿಗೆಗೆ ಸ್ಪೂರ್ತಿ : ಭುವನೇಶ್ ಪಚ್ಚಿನಡ್ಕ
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಈ ಗರುವಂದನಾ ಸಮಾರಂಭವು ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ಮೂಲಕ ಯುವ ಪೀಳಿಗೆಯ ಭವಿಷ್ಯ ನಿರ್ಮಾಣದತ್ತ ಸ್ಪೂರ್ತಿ ನೀಡಿದೆ ಎಂದು
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.

“ತಾಲೂಕಿನ ಶಿಕ್ಷಕರ ಪರಿಶ್ರಮವನ್ನು ಗುರುತಿಸಿ ಗೌರವಿಸುವ ಈ ಕಾರ್ಯಕ್ರಮ ಬಿಲ್ಲವ ಸಂಘದ ಇತಿಹಾಸದಲ್ಲಿ ಸ್ಮರಣೀಯ ಪುಟವಾಗಿದೆ,” ಎಂದು ಸಂಘದ ಪ್ರಧಾನ‌ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ತಿಳಿಸಿದರು. ಸಮಾರಂಭದ ಯಶಸ್ಸಿಗೆ ಸಹಕರಿಸಿದ ಶಿಕ್ಷಕರಾದ ಐತಪ್ಪ ಪೂಜಾರಿ ಮತ್ತು ಧನುಷ್ ಮದ್ವ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ತಾಲೂಕು ಸಂಘದ ಮಾಜಿ ಅಧ್ಯಕ್ಷರುಗಳು,
ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್., ಕೋಶಾಧಿಕಾರಿ ಸುನೀಲ್ ಎನ್. ಕುಂದರ್, ಆಂತರಿಕ ಲೆಕ್ಕಪರಿಶೋಧಕ ಪ್ರಶಾಂತ್ ಕೋಟ್ಯಾನ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್ ಶಂಬೂರು, ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.

ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here