Saturday, April 19, 2025
Homeಬಂಟ್ವಾಳಬಂಟ್ವಾಳ: ದಿಗಂತ್ ನಾಪತ್ತೆಯಾದ 10 ದಿನಗಳ ನಂತರ ಕೊನೆಗೂ ಉಡುಪಿಯಲ್ಲಿ ಪತ್ತೆ

ಬಂಟ್ವಾಳ: ದಿಗಂತ್ ನಾಪತ್ತೆಯಾದ 10 ದಿನಗಳ ನಂತರ ಕೊನೆಗೂ ಉಡುಪಿಯಲ್ಲಿ ಪತ್ತೆ

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ಯಾಡ್, ಡ್ರೋನ್ ಕ್ಯಾಮರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ದಿಗಂತ್, ಶನಿವಾರ ತಾಯಿಗೆ ಕರೆ ಮಾಡಿ ತಾನು ಉಡುಪಿಯಲ್ಲಿರುವ ವಿಚಾರ ತಿಳಿಸಿದ್ದಾನೆ. ಉಡುಪಿಯ ಡಿಮಾರ್ಟ್ ನಲ್ಲಿದ್ದೇನೆಂದು ಫೋನ್ ಕಾಲ್ ಮಾಡಿ ತಿಳಿಸಿದ್ದಾನೆ.

ಉಡುಪಿಯ ಡಿಮಾರ್ಟ್ ಸಿಬ್ಬಂದಿಯ ಮೊಬೈಲ್ ನಿಂದ ತಾಯಿಯ ಮೊಬೈಲ್ ಗೆ ದಿಗಂತ್ ಕರೆ ಮಾಡಿದ್ದ. “ನನಗೇನೂ ತೊಂದರೆಯಾಗಿಲ್ಲ” ಎಂದು ಹೇಳಿದ್ದ.

“ನನ್ನನ್ನು ಹೊತ್ತುಕೊಂಡು ಹೋಗಿದ್ದಾರೆ. ನಾನೇನು ನಾಪತ್ತೆಯಾಗುವ ಹುಡುಗ ಅಲ್ಲ ಎಲ್ಲವನ್ನೂ ನಾನು ಬಂದು ಹೇಳುತ್ತೇನೆ” ಎಂದು ದಿಗಂತ್ ತಂದೆ ತಾಯಿ ಬಳಿ ಹೇಳಿದ್ದಾನೆ.

RELATED ARTICLES
- Advertisment -
Google search engine

Most Popular