ರಾಜ್ಯಮಟ್ಟದ ಜಂಪ್‌ ರೋಪ್ ಸ್ಪರ್ಧೆಯಲ್ಲಿ ಬಂಟ್ವಾಳ ಕೊಯಿಲ ಪ್ರೌಢಶಾಲಾ ವಿದ್ಯಾರ್ಥಿ ಪ್ರಥಮ ಸ್ಥಾನ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0
18

ಕರ್ನಾಟಕ ಪಬ್ಲಿಕ್ ಸ್ಕೂಲ್ ಸಾರಕ್ಕಿ.ಜೆ.ಪಿ.ನಗರ ಬೆಂಗಳೂರಲ್ಲಿ ಮಾರ್ಚ್ ಎರಡರಂದು ನಡೆದ ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯಿಲ ಇಲ್ಲಿನ 9ನೇ ತರಗತಿ ವಿದ್ಯಾರ್ಥಿ ರಂಜನ್ ಕುಮಾರ್ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಇವರು ತರಬೇತಿ ನೀಡಿರುತ್ತಾರೆ. ಮುಖ್ಯ ಶಿಕ್ಷಕಿ ಸೌಜನ್ಯ .ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದುರ್ಗಾ ದಾಸ್ ಶೆಟ್ಟಿ ಮಾವಂತೂರು ಹಾಗೂ ಸಹಶಿಕ್ಷಕರು ಅಭಿನಂದನೆ ಸಲ್ಲಿಸಿದರು.

ವರದಿ ರಾಯಿ ರಾಜ ಕುಮಾರ

LEAVE A REPLY

Please enter your comment!
Please enter your name here