ಬಂಟ್ವಾಳ : ಪುರುಷನ ಮೃತದೇಹ ಮನೆಯ ಬಾವಿಯೊಳಗೆ ಪತ್ತೆ

0
26

ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ. ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಪತ್ತೆಯಾಗಿತ್ತು. ಇದು ಹಲವು ಸಮಯಗಳ ಹಿಂದೆ ನಾಪತ್ತೆಯಾಗಿದ್ದ ಕೊಳ್ನಾಡು ನಿವಾಸಿ ಪೂವಪ್ಪ ಪೂಜಾರಿ ಅವರ ಮೃತದೇಹ ಎಂದು ಪತ್ತೆಹಚ್ಚಲಾಗಿದೆ.

ಸ್ಥಳೀಯರಿಗೆ ದುರ್ವಾಸನೆ ಬಂದ ಕಾರಣ ಹುಡುಕಾಡಿದಾಗ ವಾಸ್ತವ್ಯವಿಲ್ಲದ ಪಾಳು ಬಿದ್ದ ಮನೆಯಂಗಳದ ಬಾವಿಯಲ್ಲಿ ಶವ ಕಂಡುಬಂದಿತ್ತು. ತಕ್ಷಣವೇ ಸ್ಥಳೀಯರು ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದವರು ಸ್ಥಳಕ್ಕಾಗಮಿಸಿ 57 ಅಡಿ ಆಳದ ಬಾವಿಯೊಳಗೆ ಇದ್ದ ಶವ ಮೇಲಕ್ಕೆತ್ತಿದ್ದಾರೆ. ಫ್ರೆಂಡ್ಸ್ ವಿಟ್ಲ ತಂಡದ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದು, ಸ್ಥಳೀಯರು ಸಹಕಾರ ನೀಡಿದ್ದಾರೆ. ಪೂವಪ್ಪ ಪೂಜಾರಿ ಆತ್ಮಹತ್ಯೆ ಬಗ್ಗೆ ಪತ್ನಿ ಸುಶೀಲಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here