ಬಂಟ್ವಾಳ: ಬಂಟ್ವಾಳ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಇಂದು ನಡೆದಿದೆ. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್‌ಡಿಪಿಐಯ ಮೂನಿಶ್ ಅಲಿ ಆಯ್ಕೆಯಾಗಿದ್ದಾರೆ.
ಪುರಸಭೆಯ 27 ಸ್ಥಾನಗಳ ಪೈಕಿ ಒಂದು ಸ್ಥಾನ ತೆರವಾಗಿತ್ತು. ಬಿಜೆಪಿಯ 11, ಕಾಂಗ್ರೆಸ್‌ನ 11 ಮತ್ತು ಎಸ್‌ಡಿಪಿಐ 4 ಸ್ಥಾನಗಳನ್ನು ಹೊಂದಿತ್ತು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ಚುನಾವಣಯಲ್ಲಿ ಪಾಲ್ಗೊಂಡಿದ್ದು, ಬಿಜೆಪಿ ಬೆಂಬಲ 13ಕ್ಕೆ ಏರಿತ್ತು. ಆದರೆ ಕಾಂಗ್ರೆಸ್‌ನ ವಾಸು ಪೂಜಾರಿಗೆ ಎಸ್‌ಡಿಪಿಐ ಬೆಂಬಲಿಸಿದ್ದು, ಎಸ್‌ಡಿಪಿಐನ ಮೂನಿಶ್ ಅಲಿಗೆ ಕಾಂಗ್ರೆಸ್ ಬೆಂಬಲ ನೀಡಿದ್ದರು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಎ. ಗೋವಿಂದ ಪ್ರಭು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹರಿಪ್ರಸಾದ್ ಸ್ಪರ್ಧಿಸಿದ್ದರು.
ಪುರಸಭೆಯ ಮೊದಲ ಅವಧಿಯಲ್ಲಿ ಎಸ್‌ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರವನ್ನು ಪಡೆದುಕೊಂಡು ಮಹಮ್ಮದ್ ಶರೀಫ್ ಅಧ್ಯಕ್ಷರಾಗಿ, ಜೆಸಿಂತ ಡಿಸೋಜ ಉಪಾಧ್ಯಕ್ಷರಾಗಿದ್ದರು. 2ನೇ ಅವಧಿಗೂ ಎಸ್‌ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಿದೆ.