ಬಂಟ್ವಾಳ ಎಸ್ ವಿ ಎಸ್ ದೇವಳ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ‘ರಸ್ತೆ ಸುರಕ್ಷತೆ ಬಗ್ಗೆ ಕಾನೂನು ಮಾಹಿತಿ’ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ಮಾತನಾಡಿದರು. ರಸ್ತೆಯಲ್ಲಿ ಸಂಚರಿಸುವಾಗ ರಸ್ತೆಯ ನಿಯಮಗಳನ್ನು ಸರಿಯಾಗಿ ಪಾಲನೆಯಿಂದ ಸಾರ್ವಜನಿಕವಾಗಿ ನಮ್ಮ ಜೀವದ ರಕ್ಷಣೆ ಮಾಡಿಕೊಳ್ಳಬೇಕು ಎಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ. ಪಿ. ಹೇಳಿದ್ದಾರೆ.
ಇಲ್ಲಿನ ಬಂಟ್ವಾಳ ಎಸ್. ವಿ. ಎಸ್. ದೇವಳ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ‘ರಸ್ತೆ ಸುರಕ್ಷತೆ ಬಗ್ಗೆ ಕಾನೂನು ಮಾಹಿತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲ ವಿನೋದ್ ಕುಮಾರ್ ವಿಷ್ಣು ನಗರ ಮಾಹಿತಿ ನೀಡಿದರು. ಹಿರಿಯ ವಕೀಲ ಬಿ. ವೆಂಕಟರಮಣ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಹಾಯಕ ಸರ್ಕಾರಿ ಅಭಿಯೋಜಕ ಹರಿಣಿ ಕುಮಾರಿ ಡಿ., ವಕೀಲರ ಸಂಘದ ಜೊತೆ ಕಾರ್ಯದರ್ಶಿ ಅಕ್ಷತಾ ಶೆಟ್ಟಿ , ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖಾ ಮೇಲ್ವಿಚಾರಕಿ ಶೋಭಾ, ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ ಎಎಸೈ ಲೋಕೇಶ್, ನಗರ ಪೊಲೀಸ್ ಠಾಣೆ ಎಎಸೈ ನಾರಾಯಣ ಮಾಹಿತಿ ನೀಡಿದರು.
ಶಾಲಾ ಮಾಜಿ ಸಂಚಾಲಕ ಶ್ರೀನಿವಾಸ ಪೈ ಬಂಟ್ವಾಳ ಶುಭ ಹಾರೈಸಿದರು. ವಕೀಲರಾದ ಶ್ರೀಧರ್ ಪೈ , ಗಣೇಶ ಪೈ ಮತ್ತಿತರರು ಇದ್ದರು. ಮುಖ್ಯ ಶಿಕ್ಷಕಿ ಸುರೇಖಾ ಕೆ. ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಹ ಶಿಕ್ಷಕಿ ಮಾಣಿಕ್ ಸುನಿತ್ ಡಿಸೋಜಾ ವಂದಿಸಿದರು. ಸಹಶಿಕ್ಷಕ ಪ್ರಶಾಂತ್ ನೇರೋಳು ಕಾರ್ಯಕ್ರಮ ನಿರೂಪಿಸಿದರು.

