ಬಂಟ್ವಾಳ: ಇಲ್ಲಿನ ಅಮ್ಟೂರು ಸಮೀಪದ ರಾಯಪ್ಪಕೋಡಿ ನಿವಾಸಿ, ಹಿರಿಯ ಕಾಂಗ್ರೆಸ್ ಮುಖಂಡ ಎ.ನೋಣಯ್ಯ ಪೂಜಾರಿ (85) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಮೃತರಿಗೆ ಸಿವಿಲ್ ಎಂಜಿನಿಯರ್ ಗಣೇಶ ಅಮ್ಟೂರು ಸಹಿತ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ತುರ್ತು ಪರಿಸ್ಥಿತಿ ವೇಳೆ ಜೈಲು ಶಿಕ್ಷೆ ಅನುಭವಿಸಿದ್ದ ಇವರು ಭೂನ್ಯಾಯ ಮಂಡಳಿ ಸದಸ್ಯರಾಗಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ, ಬಾಯಿಲ ರಾಜೀವ ಯುವಕ ಮಂಡಲ ಬಾಯಿಲ ಗೌರವಾಧ್ಯಕ್ಷರಾಗಿ, ಗಣೇಶ ಗೆಳೆಯರ ಬಳಗದ ಅಧ್ಯಕ್ಷರಾಗಿ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರಿಗೆ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.