ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿ ಶೈಕ್ಷಣಿಕ ವರ್ಷ ೨೦೨೫-೨೬ ನೇ ಸಾಲಿನಲ್ಲಿ ಆರ್ಮಿವಿಂಗ್ ಎನ್.ಸಿ.ಸಿ ಘಟಕ ಪರ‍್ರಂಭಿಸಲು ಎನ್‌ಸಿಸಿ ಮಂಗಳೂರು ಗ್ರೂಪ್‌ನ ೧೮ ಕರ್ನಾಟಕ ಬೆಟಾಲಿಯನ್ ಮಂಗಳೂರು ಅನುಮತಿ ನೀಡಿರುತ್ತಾರೆ.
ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ ವಿದ್ಯಾಗಿರಿ ಬಂಟ್ವಾಳ ಇದರ ಆಡಳಿತಕ್ಕೆ ಒಳಪಟ್ಟ ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇದಕ್ಕೆ ೧೯೭೯ರಲ್ಲಿ ಶಿಕ್ಷಣ ಇಲಾಖೆಯಿಂದ ಆಂಗ್ಲ ಮಾಧ್ಯಮ ಬೋಧನೆಗೆ ಅನುಮತಿ ದೊರೆತ ಬಂಟ್ವಾಳ ತಾಲೂಕಿನ ಏಕೈಕ ಶಾಲೆ ಆಗಿದೆ.
ಬಂಟ್ವಾಳದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಪ್ರಾರಂಭವಾದ ಮೊತ್ತ ಮೊದಲ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗೆ ಬಂಟ್ವಾಳ ತಾಲೂಕಿನಲ್ಲಿ ಪ್ರಥಮವಾಗಿ ಆರ್ಮಿವಿಂಗ್ (ಜೆಡಿ/ಜೆಡ್ಲೂö್ಯ) ಎನ್.ಸಿ.ಸಿ ಘಟಕ ಆರಂಭಿಸಲು ಅನುಮತಿ ದೊರೆತಿರುವುದಕ್ಕೆ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಸಂಘದ ಉಪಾಧ್ಯಕ್ಷೆ ವತ್ಸಲ ಕಾಮತ್, ಸಂಘದ ಕಾರ್ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್ ಹಾಗೂ ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆ ವಿದ್ಯಾಗಿರಿ ಬಂಟ್ವಾಳ ಇದರ ಸಂಚಾಲಕಿ ಕೆ. ರೇಖಾ ಶೆಣೈ, ಸಮೂಹ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕ- ಶಿಕ್ಷಕೇತರ ವರ್ಗ ಶುಭ ಹಾರೈಸಿದ್ದಾರೆ.