ಬಂಟ್ವಾಳ : ವಿದ್ಯಾರ್ಥಿ ಸಂಸತ್ತಿನ ರಚನೆಯ ಅಂಗವಾಗಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂತೆಗೆತ ಮತ್ತು ಚುನಾವಣಾ ಪ್ರಚಾರದೊಂದಿಗೆ ಮತದಾನವು ನಡೆಯಿತು.
ದಿನಾಂಕ 13.06.2026 ರಂದು ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶಿಕ್ಷಕಿ ಗಾಯತ್ರಿ ಮತ್ತು ಸಂಘದ ಎಲ್ಲಾ ಸದಸ್ಯರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನೆರವೇರಿತು.
ಆಧುನಿಕ ತಂತ್ರಜ್ಞಾನದ ಮೂಲಕ ಎಲ್ಲಾ ವಿದ್ಯಾರ್ಥಿಗಳು ಮತಚಲಾಯಿಸಿದರು. ವಿದ್ಯಾರ್ಥಿ ಸಂಘದ ನಾಯಕರಾಗಿ ಭವಿಷ್ ಎಲ್ ಪೂಜಾರಿ 10 ನೇ, ಉಪನಾಯಕನಾಗಿ ಅನೂಪ್ ರಾಜೇಶ್ 9ನೇ, ಯೋಜನಾಧಿಕಾರಿಯಾಗಿ ಸ್ನೇಹಲ್ ಗಾಣಿಗ 10 ನೇ ತರಗತಿ ಇವರು ಆಯ್ಕೆಯಾದರು.
ಪ್ರೌಢಶಾಲಾ ಮುಖ್ಯೋಪಾಧ್ಯಯರಾದ ಶ್ರೀಯುತ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ ಶೆಟ್ಟಿ ಮತ್ತು ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ವೀಣಾ ದೇವಾಡಿಗ ಇವರ ಮಾರ್ಗದರ್ಶನದಲ್ಲಿ ಚುನಾವಣೆ ಯಶಸ್ವಿಯಾಗಿ ನಡೆಸಲಾಯಿತು.

