ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ

0
127

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ ರವಿವಾರ ನಾರಾಯಣಗುರು ಸಭಾ ಭವನ ಗಾಣದಪಡ್ಪು ಇಲ್ಲಿ ನೇರವೇರಿತು.
ರಾಯಿ ಕೊಯಿಲ ಅರಳದ ನೂತನ ನಾರಾಯಣ ಗುರುಗಳ ಜ್ಞಾನಮಂದಿರ ಹಾಗೂ ಸಮುದಾಯ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ
ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಅಧೀನಕೊಳಪಟ್ಟ ಶ್ರೀ ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್ ವಗ್ಗ, ಕೊಯಿಲ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಗದೀಶ್ ಕೊಯಿಲ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರು ರಾಘವೇಂದ್ರ ರಾಯಿ ಇವರನ್ನು ಅಭಿನಂದಿಸಲಾಯಿತು. ಬಂಟ್ವಾಳ ತಾಲೂಕು ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪ ಅಧ್ಯಕ್ಷ ವಹಿಸಿದ್ದರು. ಮಾಜಿ ಅಧ್ಯಕ್ಷರು ಹರಿಕೃಷ್ಣ ಬಂಟ್ವಾಳ ಪ್ರಾಸ್ತಾವನೆಗೈದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಭುವನೇಶ್ ಪಚಿನಡ್ಕ, ಬೂಡದ ಅಧ್ಯಕ್ಷರು ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ, ಲೆಕ್ಕಪರಿಶೋಧಕರು ಹೇಮಂತ್ ಕುಮಾರ್ ಮೂರ್ಜೆ, ರಾಯಿ ಸಂಘದ ಪ್ರತಿಷ್ಠಾ ಮಹೋತ್ಸ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಜೆಎಸ್. ಹೊರೆಕಾಣಿಕೆ ಸಮಿತಿ ಪ್ರಧಾನ ಸಂಚಾಲಕರು ಪ್ರಕಾಶ್ ಅಂಚನ್, ರಾಯಿ ಸಂಘದ ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆಗುತ್ತು, ತಾಲೂಕು ಸಂಘದ ಮಹಿಳಾ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here