ಬಂಟ್ವಾಳ: ಹಿಂದೂ ಯುವಸೇನೆ ಮುಖಂಡರೊಬ್ಬರಿಗೆ ಚೂರಿ ಇರಿದಿದದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರವಿ ಯಾನೆ ರವೀಂದ್ರ ಎಂದು ಗುರುತಿಸಲಾಗಿದೆ. ಏ 114ರಂದು ರಾತ್ರಿ ಬಂಟ್ವಾಳದ ಜಕ್ರಿಬೆಎಟ್ಟು ಬಳಿ ಹಿಂದೂ ಯುವಸೇನೆಯ ಮುಖಂಡ ಪುಷ್ಪರಾಜ್ ಎಂಬಾತನಿಗಗೆ ರವಿ ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದ. ಪುಷ್ಪರಾಜನನ್ನು ಮಂಗಳೂರು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಆರೋಪಿ ಫೋನ್ ಸ್ವಿಚ್ ಆಫ್ ಮಾಡಿ ತಲೆ ಮರೆಸಿಕೊಂಡಿದ್ದ. ನಾಲ್ಕು ದಿನಗಳ ಬಳಿಕ ಆರೋಪಿಯನ್ನು ಕಾವಳಕಟ್ಟೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಲಾಟೆಗೆ ಕಾರಣ ತಿಳಿದುಬಂದಿಲ್ಲ. ತನಿಖೆಯಿಂದ ತಿಳಿದುಬರಬೇಕಿದೆ.