Sunday, July 14, 2024
Homeಅಪರಾಧಬಂಟ್ವಾಳ : ಹಿಂದೂ ಯುವಸೇನೆ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಯುವಸೇನೆ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೊಬ್ಬನಿಗೆ ಚೂರಿಯಿಂದ ಇರಿಯಲಾದ ಘಟನೆ ನಡೆದಿದೆ. ಆತನ ಸ್ನೇಹಿತನೇ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಬಂಟ್ವಾಳದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.
ಹಿಂದೂ ಯುವಸೇನೆಯ ಮುಖಂಡ, ಉದ್ಯಮಿ ಪುಷ್ಪರಾಜ್ ಎಂಬಾತನಿಗೆ ಆತನ ಸ್ನೇಹಿತ ರವಿ ಎಂಬಾತ ಚೂರಿಯಿಂದ ಇರಿದಿದ್ದಾನೆ. ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ ಚೂರಿ ಇರಿಯಲಾಗಿದೆ. ಆಟೊ ರಿಕ್ಷಾದಲ್ಲಿ ಜೊತೆಯಾಗಿ ಹೋಗುತ್ತಿದ್ದಾಗ ಪುಷ್ಪರಾಜ್ ಗೆ ರವಿ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಪುಷ್ಪರಾಜ್ ನ ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ರವಿ ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES
- Advertisment -
Google search engine

Most Popular