ಬಂಟ್ವಾಳ: ವಿದ್ಯಾರ್ಥಿ ಜೀವನದಲ್ಲಿ ಬರುವಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಅಧ್ಯಯನದ ಸಮಯದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ನಾರಾಯಣ ನಾಯಕ್‌ರವರುಕರೆ ನೀಡಿದರು. ಇವರುಎಸ್.ವಿ.ಎಸ್. ಕಾಲೇಜಿನಲ್ಲಿ ನಡೆದ 2025-26ನೇ ಶೈಕ್ಷಣಿಕ ವರ್ಷದ ಪುನಶ್ಚೇತನಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಇರುವಂತಹ ವಿದ್ಯಾರ್ಥಿವೇತನದ ಸೌಲಭ್ಯದಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದಎಂ.ಡಿ.ಮಂಚಿ ಸ್ವಾಗತಿಸಿ, ವಿದ್ಯಾರ್ಥಿಕ್ಷೇಮಪಾಲನ ಅಧಿಕಾರಿ ಶಿವಣ್ಣಪ್ರಭು ವಂದಿಸಿದರು.ಶ್ರೀಮತಿ ಅಖಿಲಾ ಪೈ ನಿರೂಪಿಸಿದರು. ವೇದಿಕೆಯಲ್ಲಿ ಡಾ.ಕಾಶಿನಾಥ ಶಾಸ್ತಿç ಹೆಚ್.ವಿ. ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾದ ವಂದಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು.