ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

0
22

ಬಂಟ್ವಾಳ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಕುಟ್ಟಿಂಚಾಲ್ ನ ತರಂಪಲ್ಲಿ ಮನೆಯ ಪ್ರಿನ್ಸ್ ಟಿ ಜೆ ಜೋಶ್ (43) ಎಂದು ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತನನ್ನು ಕೇರಳದ ಕುಟ್ಟಂಪುಝ ಎಂಬಲ್ಲಿ ದಸ್ತಗಿರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಬಂಟ್ವಾಳ ಎಸಿಜೆ ಹಾಗೂ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here