ಬಪ್ಪನಾಡು: ವಿಜೃಂಭಣೆಯ ತೂಟೆ ದಾರ,ಜಲಕದ ಬಲಿ ಉತ್ಸವ

0
926

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ತೂಟೆ ದಾರ,ಜಲಕದ ಬಲಿ ಉತ್ಸವ ವಿಜೃಂಭಣೆಯಿಂದ ನಡೆಯಿತು

ರಾತ್ರಿ ಶ್ರೀ ದೇವರ ಉತ್ಸವ ಬಲಿ, ಪಲ್ಲಕಿ ಉತ್ಸವ, ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆದು ದೇವರು ಭವ್ಯ ಮೆರವಣಿಗೆಯಲ್ಲಿ ದೋಣಿ ಮೂಲಕ ಚಂದ್ರಶಾನುಭಾಗರ ಕುದ್ರುವಿಗೆ ತೆರಳಿ ಶ್ರೀ ದೇವರಿಗೆ ಅವಭೃತ ಸ್ನಾನ ನಡೆಯಿತು.
ಬಳಿಕ ತೂಟೆ ದಾರ,ಜಲಕದ ಬಲಿ ಉತ್ಸವ, ಶ್ರೀ ದೇವರ ಹಾಗೂ ಭಗವತಿಯರ ಭೇಟಿ ಧ್ವಜಾವರೋಹಣ ನಡೆಯಿತು.
ಈ ಸಂದರ್ಭ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅತ್ತೂರು ರಾಘವೇಂದ್ರ ಉಡುಪ,
ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ,ಅನುವಂಶಿಕ ಮೊಕ್ತೇಸರ ಹಾಗೂ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಮಾಜೀ ಸಚಿವ ಅಭಯ್ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ವೇತಾಪಳ್ಳಿ ಡಾ. ಹರೀಶ್ಚಂದ್ರ ಪಿ ಸಾಲ್ಯಾನ್,ನಾಗೇಶ್ ಬಪ್ಪನಾಡು ಶಿವಶಂಕರ್ ವರ್ಮ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here