Sunday, July 14, 2024
Homeಮಂಗಳೂರುಪರಿಷತ್ ಚುನಾವಣೆ | ಜೂ. 1ರಿಂದ ಜೂ. 3ರ ವರೆಗೆ ಮದ್ಯ ಮಾರಾಟ ಬಂದ್

ಪರಿಷತ್ ಚುನಾವಣೆ | ಜೂ. 1ರಿಂದ ಜೂ. 3ರ ವರೆಗೆ ಮದ್ಯ ಮಾರಾಟ ಬಂದ್

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಹಿನ್ನೆಲೆಯಲ್ಲಿ  ಜೂ. 1ರ ಸಂಜೆ 4 ಗಂಟೆಯಿಂದ ಜೂ. 3ರ ಮಧ್ಯರಾತ್ರಿ 12 ಗಂಟೆ ವರೆಗೆ ಮದ್ಯ ಮುಕ್ತ ದಿನಗಳು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ.

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೊಗಳು, ಮದ್ಯ ತಯಾರಿಕಾ ಡಿಸ್ಟಿಲ್ಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.  

RELATED ARTICLES
- Advertisment -
Google search engine

Most Popular