Thursday, July 25, 2024
Homeಅಪರಾಧಕಾಂಗ್ರೆಸ್​​ ಕಾರ್ಯಕರ್ತನ ಬರ್ಬರ ಹತ್ಯೆ

ಕಾಂಗ್ರೆಸ್​​ ಕಾರ್ಯಕರ್ತನ ಬರ್ಬರ ಹತ್ಯೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಕಾಂಗ್ರೆಸ್​​ ಕಾರ್ಯಕರ್ತನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆಗೈದು ಮರಕ್ಕೆ ನೇತು ಹಾಕಿದ ಘಟನೆ ನಡೆದಿದೆ.

ಸಾವಿಗೀಡಾದ ಕಾಂಗ್ರೆಸ್‌ ಕಾರ್ಯಕರ್ತ ಶರಣಪ್ಪ ಸಂದೀಗೌಡರ್ ಎಂದು ತಿಳಿದು ಬಂದಿದೆ. ಡೋಣಿ ಗ್ರಾಮದಲ್ಲಿ ಶರಣಪ್ಪ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದ.

ಶರಣಪ್ಪ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಮರಕ್ಕೆ ಹಗ್ಗದಿಂದ ಕಟ್ಟಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕಾಗಮಿಸಿದ ಮುಂಡರಗಿ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular