ಹಾಸನದಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಒಬ್ಬನಿಗೆ ಕಂಠಪೂರ್ತಿ ಕುಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಚನ್ನಪಟ್ಟಣದಲ್ಲಿ ಈ ಒಂದು ಕೊಲೆ ನಡೆದಿದೆ.ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ರೌಡಿಶೀಟರ್ ರಖಿತಾ ಮದ್ಯ ಸೇವಿಸಿದ್ದ. ಆಟೋದಲ್ಲಿ ಕುಳಿತು ರಖಿತಾ ಮಧ್ಯ ಸೇವಿಸಿದ್ದ. ಇದೆ ವೇಳೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆ ಯತ್ನ ಕೆಸ್ ನಲ್ಲಿ ರಖಿತಾ ಆರೋಪಿಯಾಗಿದ್ದ. ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.