ಬೆಂಗಳೂರು: ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ. ಕುಟುಂಬ ಸಮೇತ ವಾಸವಿದ್ದ ಶೋಭಾ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದ್ದಾರೆ.
ಮನೆಯಲ್ಲಿ ಆಗಾಗ್ಗೆ ಒಬ್ಬರೇ ಇರುತ್ತಿದ್ದರು. ಒಬ್ಬ ಮಗಳು ಗಂಡನ ಮನೆಯಿಂದ ಶೋಭಾಗೆ ಸಾಕಷ್ಟು ಸಲ ಕರೆ ಮಾಡಿದ್ದಾರೆ. ಆದರೆ, ಎಷ್ಟೇ ಸಾರಿ ಕರೆ ಮಾಡಿದರೂ ತಾಯಿ ಫೋನ್ ಸ್ವೀಕರಿಸಿಲ್ಲ.
ತಾಯಿ ಶೋಭಾ ಫೋನ್ ಎತ್ತದ ಕಾರಣ ಮಗಳು ಮನೆಯ ಹತ್ತಿರ ಬಂದು ನೋಡಿದ್ದಾಳೆ. ಆಗ ತಾಯಿಯ ಬೆತ್ತಲೆ ಶವ ಕಂಡಿದೆ. ಭಯಗೊಂಡ ಪುತ್ರಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಯಾರು ಕೊಲೆ ಮಾಡಿದ್ದಾರೆ. ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.