ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ

0
127

ಮಾಣಿ: ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು.

ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾಶಿವ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಯಾಗಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ರವರು ಮಾತಾಡಿ, ಯೋಜನೆ ನಡೆದು ಬಂದ ದಾರಿ, ಯೋಜನೆಯ ಹಿನ್ನೆಲೆ, ನಿಯಮಗಳು, ಸಂಘದ ಜವಾಬ್ದಾರಿಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಬಂಟ್ವಾಳ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ರವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಎಲ್ಲಾ ಕಾರ್ಯಕ್ರಮಗಳು ಅರ್ಥ ಪೂರ್ಣವಾಗಿ ನಡೆಯುವ ಬಗ್ಗೆ , ತಾನೂ ಎಲ್ಲಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಬಗ್ಗೆ ತಿಳಿಸಿದರು. ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡುತ್ತಾ ಸರ್ಕಾರವೂ ಮಾಡದೇ ಇರುವ ಅನೇಕ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಾಡುತ್ತಿದೆ. ಬ್ಯಾಂಕ್ ಮೂಲಕ ಸದಸ್ಯರಿಗೆ ಸಾಲ ಸೌಲಭ್ಯ ಒದಗಿಸುವುದಲ್ಲದೆ ಸಮುದಾಯಕ್ಕೂ ವಿವಿಧ ರೀತಿಯ ಸೇವೆ ಒದಗಿಸುತ್ತಿದೆ ಎಂದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕಮಲಾಕ್ಷಿ ಉದ್ಯಮಿ ರತ್ನಾಕರ, ಬರಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ, ಅಮಿತ್ ಜೈನ್, ಶಾಲೆಯ ಮುಖ್ಯ ಶಿಕ್ಷಕಿ ಗಾಯತ್ರಿ,, ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷ ಶಿವಾನಂದ ಉಪಸ್ಥಿತರಿದ್ದರು. ಬರಿಮಾರು ಒಕ್ಕೂಟದ ಅಧ್ಯಕ್ಷರೂ ,ಮಾಣಿ ವಲಯಧ್ಯಕ್ಷರಾದ ಸುಧಾಕರ ಸಪಲ್ಯ ಕಾರ್ಯಕ್ರಮದ ಅಧ್ಯಕ್ಷೆಯನ್ನು ವಹಿಸಿದ್ದರು.
ಉತ್ತಮ ಸಂಘಗಳನ್ನು ಗುರುತಿಸಿ ಅಭಿನಂದಿಸಲಾಯಿತು. SSLC ಯಲ್ಲಿ 90% ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮಲ್ಲಿ ಹರಿಣಾಕ್ಷಿ ಸ್ವಾಗತಿಸಿ ಸುಜಾತ ವಂದಿಸಿದರು. ಮಾಣಿ ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾ ಪ್ರತಿನಿಧಿ ಲಾವಣ್ಯ ವರದಿ ವಾಚಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗೀತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here